ಇತ್ತೀಚಿನ ಸುದ್ದಿ
ಬೆಳ್ತಂಗಡಿ: 7.60 ಲಕ್ಷ ರೂ .ಮೌಲ್ಯದ ಎಂಡಿಎಂಎ ಹಾಗೂ ಗಾಂಜಾ ವಶ; ಒಬ್ಬನ ಬಂಧನ; ಇನ್ನೋರ್ವ ಪರಾರಿ
31/07/2026, 12:04
ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಸುಮಾರು 7.60 ಲಕ್ಷ ರೂ .ಮೌಲ್ಯದ 76.59 ಗ್ರಾಂ ಎಂಡಿಎಂಎ ಹಾಗೂ ಗಾಂಜಾದೊಂದಿಗೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್ (21) ಎಂದು ತಿಳಿದು ಬಂದಿದೆ.
ಜುಲೈ 29ರಂದು ರಾತ್ರಿ, ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ. ಮತ್ತು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ತೆರಳಿದಾಗ, KA18 A 7203 ನೇ ಅಟೋ ರಿಕ್ಷಾದ ಬಳಿ ನಿಂತಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದಾಗಿ ವರ್ತಿಸುತ್ತಿರುವುದನ್ನು ಕಂಡು ಆತನನ್ನು ಹಿಡಿದು ವಿಚಾರಿಸಿದಾಗ, ಆತನು ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್ ಎಂಬುದಾಗಿ ತಿಳಿಸಿರುತ್ತಾನೆ. ಆತನ ವರ್ತನೆಯಿಂದ ಅನುಮಾನಗೊಂಡು ತಪಾಸಣೆ ನಡೆಸಲಾಗಿ, ಆತನ ಬಳಿ ಸುಮಾರು 27 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ರಿಕ್ಷಾ ಹಾಗೂ ಕಾರನ್ನು ಪರಿಶೀಲಿಸಲಾಗಿ ಸುಮಾರು 7,60,000/- ರೂಪಾಯಿ ಮೌಲ್ಯದ 76.59 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಪತ್ತೆಯಾಗಿರುತ್ತದೆ. ಆರೋಪಿತನಿಗೆ ಮಾದಕವಸ್ತು ನೀಡಲು ಬಂದ ಮತ್ತೋರ್ವ ಆರೋಪಿ ಅಮ್ಜತ್ ಖರಾರ್ ಎಂಬಾತನು ತಾನು ತಂದಿದ್ದ KA21 MA 4990 ನೇ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುತ್ತಾನೆ ಎಂಬುದಾಗಿ ತಿಳಿಸಿರುತ್ತಾನೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 82/2026, ಕಲಂ: 8(c),20(b),(ii)(A) ,27A, 22(c), NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.












