9:43 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: 7.60 ಲಕ್ಷ ರೂ .ಮೌಲ್ಯದ ಎಂಡಿಎಂಎ ಹಾಗೂ ಗಾಂಜಾ ವಶ; ಒಬ್ಬನ ಬಂಧನ; ಇನ್ನೋರ್ವ ಪರಾರಿ

31/07/2026, 12:04

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಸುಮಾರು 7.60 ಲಕ್ಷ ರೂ .ಮೌಲ್ಯದ 76.59 ಗ್ರಾಂ ಎಂಡಿಎಂಎ ಹಾಗೂ ಗಾಂಜಾದೊಂದಿಗೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ (21) ಎಂದು ತಿಳಿದು ಬಂದಿದೆ.
ಜುಲೈ 29ರಂದು ರಾತ್ರಿ, ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ. ಮತ್ತು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ತೆರಳಿದಾಗ, KA18 A 7203 ನೇ ಅಟೋ ರಿಕ್ಷಾದ ಬಳಿ ನಿಂತಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದಾಗಿ ವರ್ತಿಸುತ್ತಿರುವುದನ್ನು ಕಂಡು ಆತನನ್ನು ಹಿಡಿದು ವಿಚಾರಿಸಿದಾಗ, ಆತನು ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ ಎಂಬುದಾಗಿ ತಿಳಿಸಿರುತ್ತಾನೆ. ಆತನ ವರ್ತನೆಯಿಂದ ಅನುಮಾನಗೊಂಡು ತಪಾಸಣೆ ನಡೆಸಲಾಗಿ, ಆತನ ಬಳಿ ಸುಮಾರು 27 ಗ್ರಾಂ ಗಾಂಜಾ ಹಾಗೂ ಒಂದು‌ ಮೊಬೈಲ್ ಫೋನ್ ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ರಿಕ್ಷಾ ಹಾಗೂ ಕಾರನ್ನು ಪರಿಶೀಲಿಸಲಾಗಿ ಸುಮಾರು 7,60,000/- ರೂಪಾಯಿ ಮೌಲ್ಯದ 76.59 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಪತ್ತೆಯಾಗಿರುತ್ತದೆ. ಆರೋಪಿತನಿಗೆ ಮಾದಕವಸ್ತು ನೀಡಲು ಬಂದ ಮತ್ತೋರ್ವ ಆರೋಪಿ ಅಮ್ಜತ್‌ ಖರಾರ್‌ ಎಂಬಾತನು ತಾನು ತಂದಿದ್ದ KA21 MA 4990 ನೇ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುತ್ತಾನೆ ಎಂಬುದಾಗಿ ತಿಳಿಸಿರುತ್ತಾನೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಅಕ್ರ 82/2026, ಕಲಂ: 8(c),20(b),(ii)(A) ,27A, 22(c), NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು