6:57 PM Wednesday23 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿ: ಎಸಿ ಆದೇಶ

15/12/2021, 22:52

ಪುತ್ತೂರು(reporterkarnataka.com):

ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲ್ ಅವರು ಆದೇಶ ಹೊರಡಿಸಿದ್ದಾರೆ. 

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ದಲಾಯಿಸಿ ಪುತ್ತೂರು ಉಪ ವಿಭಾಗದಾದ್ಯಂತ ದಿನಾಂಕ:15/12/2021 ರಿಂದ ದಿನಾಂಕ:17/12/2011ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸುತ್ತೇನೆ ಎಂದು ಸಹಾಯಕ ಆಯುಕ್ತರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.

ಏನಿದೆ ಆದೇಶದಲ್ಲಿ ?: ಈ ಅವಧಿಯಲ್ಲಿ  ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ   ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತು ಗುಂಪು ಸೇರಬಾರದು ಅಥವಾ ಗುಂಪು ಸೇರುವುದನ್ನು ನಿಷೇಧಿಸಿದೆ.

ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ, ಗದೆ, ಕೋಲು, ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.

ಯಾವುದೇ ಸಾರ್ವಜನಿಕ ಮೇರವಣಿಗೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.

ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.

ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಬೇಷ್ಠ ಮಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು