11:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂದೂರುವೆಲ್ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ;   ದುರಂತಕ್ಕೆ ಏನು ಕಾರಣ?

10/01/2022, 11:39

ಮಂಗಳೂರು(reporterkarnataka.com): ನಗರದ ಬೆಂದೂರುವೆಲ್‌ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್‌ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.

ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂಕಿ ಹಿಡಿಯಲು ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದೆ. 

ಗಣೇಶ್ ಪ್ರಭು ಮಾಲಕತ್ವದ ಭುವನೇಂದ್ರ ಎಂಟರ್‌ ಪ್ರೈಸಸ್‌ನ ಎಲ್‌ ಶೋರೂಂ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಪಾರ ಮೌಲ್ಯದ ವಿದ್ಯುತ್ ಪರಿಕರಗಳು ಸೇರಿದಂತೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಅಂಗಡಿ ಮಾಲಕರು ಇಂದು ಬೆಳಿಗ್ಗೆ ಶೋರೂಂನ ಬಾಗಿಲು ತೆರೆಯಲು ಬಂದ ವೇಳೆ ಈ ಅನಾಹುತವಾಗಿದ್ದು, ಬಾಗಿಲು ತೆರೆಯುತ್ತಿದ್ದಂತೆ ಮತ್ತೆ ಭಾರೀ ಬೆಂಕಿ , ಹೊಗೆ ಆವರಿಸಿದೆ.

ಸ್ಥಳೀಯರು ಕೂಡಲೇ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಮೂಲಕ ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು