8:57 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಹೇಯ ಕೃತ್ಯ: ಮಗನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ತಂದೆ; ಕಾರಣ ಏನು ಗೊತ್ತೇ?

07/04/2022, 21:18

ಬೆಂಗಳೂರು(reporterkarnataka.com): 12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ ಎಂದು ಹಾಡಹಗಲೇ ತಂದೆಯೇ ಮಗನನ್ನು ಬೆಂಕಿ ಹಚ್ಚಿ ಕೊಂದ ಅಮಾನವೀಯ ಘಟನೆ ಬೆಂಗಳೂರಿನ ಅಜಾದ್ ನಗರದಲ್ಲಿ ನಡೆದಿದೆ.

ಕಳೆದ ವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅರ್ಪಿತ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಸುಟ್ಟ ಗಾಯಗಳಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅರ್ಪಿತ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮಗನ ಮೇಲೆ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯವಹಾರದ ವಿಷಯ ಸಂಬಂಧ ಅಪ್ಪ ಮಗನ ನಡುವೆ ಸಣ್ಣ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಕುಪಿತಗೊಂಡ ಅಪ್ಪ ಸುರೇಂದ್ರ ಮಗ ಅರ್ಪಿತ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಕೂಡಲೇ ಪರಿಚಯಸ್ಥರು ಅರ್ಪಿತ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಪೊಲೀಸರ ಮುಂದೆ ಅರ್ಪಿತ್ ಹೇಳಿಕೆ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತೀವ್ರ ವಿಚಾರಣೆ ನಡೆಸಿದ ಚಾಮರಾಜಪೇಟೆ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು