8:18 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಭಾರೀ ವರ್ಷಧಾರೆ: ರಸ್ತೆಗಳು ಜಲಾವೃತ; ಶಾಲೆಗಳಿಗೆ ರಜೆ; ಮನೆಯಿಂದ ಕೆಲಸ ನಿರ್ವಹಿಸಿದ ಐಟಿ, ಬಿಟಿ ಸಿಬ್ಬಂದಿಗಳು

16/10/2024, 21:14

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮವ
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನಗರದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಮಳೆಯ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರ ಶಾಲೆಗಳಿಗೆ ರಜೆ ಘೋಷಿಸಿದೆ. ಟೆಕ್ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ.
ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ. ಕಷ್ಟಕರ ಹವಾಮಾನ ಪರಿಸ್ಥಿತಿಗಳಲ್ಲಿ ವಿದ್ಯಾರ್ಥಿಗಳ ರಕ್ಷಣೆಯನ್ನು ಖಾತ್ರಿಪಡಿಸಿಕೊಳ್ಳಲು ಕಾಲೇಜು ಪ್ರಾಂಶುಪಾಲರಿಗೆ ಸುರಕ್ಷತಾ ಮಾರ್ಗಸೂಚಿಗಳನ್ನು ನೀಡಲಾಗಿದೆ.
ಮಳೆಗೆ ‘ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದ ಬೆಂಗಳೂರಿನಲ್ಲಿ ವಾಹನಗಳು ಜಲಾವೃತಗೊಂಡ ರಸ್ತೆಗಳಲ್ಲಿ ಸಂಚರಿಸಿವೆ. ಕೆಲವು ರಸ್ತೆಯಲ್ಲೇ ಸಿಲುಕಿಕೊಂಡಿವೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ನಗರದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಂಗಳವಾರ ಮುಂಜಾನೆಯಿಂದ ನಿರಂತರ ಮಳೆಯಾಗುತ್ತಿದ್ದು, ನಗರದ ವಿವಿಧೆಡೆ ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾಗಿದೆ. ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ಜತೆಗೆ ಕರಾವಳಿ ಕರ್ನಾಟಕ,ತುಮಕೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಕೋಲಾರ, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು