10:13 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಯಾತ್ರಾರ್ಥಿಗಳಿದ್ದ ಬಸ್ ಮೂಡಿಗೆರೆ ಬಳಿ ಅಪಘಾತ: ಮಹಿಳೆ ಸಾವು; 5 ಮಂದಿ ಗಂಭೀರ

04/11/2023, 11:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.ಮೃತ ಮಹಿಳೆಯನ್ನು ಯಲಹಂಕ ನಿವಾಸಿ ಸುರೇಖಾ (45) ಎಂದು ಗುರುತಿಸಲಾಗಿದೆ.


ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ಅಪಘಾತಕ್ಕೀಡಾಗಿತ್ತು. ಬಸ್ಸಿನಲ್ಲಿ 48ಕ್ಕೂ ಹೆಚ್ಚು ಪ್ರವಾಸಿಗರಿದ್ದರು.
ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಬಸ್ ತೆರಳುತ್ತಿತ್ತು. ಬೆಳಗಿನ ಜಾವ 4:45 ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಸ್ತೆ ಬದಿ
ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಸ್ಥಳಿಯರು
ಮನವಿ ಮಾಡಿದ್ದರೂ ತಡೆಗೋಡೆ ನಿರ್ಮಾಣ ನಡೆದಿಲ್ಲ. ಇದೇ ಜಾಗದಲ್ಲಿ 70ಕ್ಕೂ ಹೆಚ್ಚು ಅಪಘಾತಗಳಾಗಿವೆ. ಆದರೆ ಸ್ಥಳೀಯ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.
ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು