4:25 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ ಏನು ಗೊತ್ತೇ?

20/11/2023, 10:52

ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು.
ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ನೇತ್ರಾವತಿ ಅವರು ಬರೆಯಬೇಕಿತ್ತು. ಆದರೆ ಪರೀಕ್ಷೆಯ ಕೇಂದ್ರ ಬೆಂಗಳೂರಿನಲ್ಲಿ ಇತ್ತು. ನೇತ್ರಾವತಿ ಅವರು
ಎಂಟುವರೆ ತಿಂಗಳ ತುಂಬು ಗರ್ಭಿಣಿಯಾಗಿರುವುದರಿಂದಬೆಂಗಳೂರಿಗೆ ತೆರಳಿ ಪರೀಕ್ಷೆ ಬರೆಯಲು ಸಾಧ್ಯವಿರಲಿಲ್ಲ. ಆದುದರಿಖದ ಅವರು ಮಂಗಳೂರಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿದ ಹೈಕೋರ್ಟ್‌ನ ಸಮಿತಿಯು ಈ ಅರ್ಜಿಯನ್ನು ಪುರಸ್ಕರಿಸಿ ಅಭ್ಯರ್ಥಿಯ ಮನವಿಯಂತೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಿತ್ತು.
ರಾಜ್ಯ ಹೈಕೋರ್ಟ್‌ನ ವಿಶೇಷ ಅನುಮತಿ ಹಿನ್ನೆಲೆಯಲ್ಲಿ ನೇತ್ರಾವತಿ ನ್ಯಾಯಾಂಗ ಸೇವೆಯ ಮುಖ್ಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯಾಲಯದ ಸಂಕೀರ್ಣದ ಕಟ್ಟಡದಲ್ಲಿ ಶನಿವಾರ ಮತ್ತು ಭಾನುವಾರ ಪರೀಕ್ಷೆ ಬರೆದಿದ್ದಾರೆ. ನೇತ್ರಾವತಿ ಅವರು ತುಂಬು ಗರ್ಭಿಣಿಯಾಗಿರುವುದರಿಂದ ನ್ಯಾಯಾಲಯದ ಆವರಣದಲ್ಲಿ ಆ್ಯಂಬುಲೆನ್ಸ್ ವಾಹನವನ್ನು ಸಜ್ಜುಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು