2:03 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಕನ್ನಡ ಕಾರ್ಯಕ್ರಮ: ವಿವಿಧ ನೃತ್ಯ ಸ್ಪರ್ಧೆ

30/11/2024, 15:29

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಸತ್ಯವತಿ ಬಸವರಾಜು ಶುಭ ಹಾರೈಸಿದರು.
ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ ಗಳ ಮಾರಾಟದ ಜೊತೆಗೆ ಸಾಮಾಜಿಕ ಕಳಕಳಿ ಇರುವುದು ವಿಶೇಷ” ಎಂದರು.
ಈ ಕಾರ್ಯಕ್ರಮ ಸಂಧ್ಯಾ ಜಯರಾಮ್ ಅವರ ಸಹಯೋಗದಲ್ಲಿ ನಡೆಯಿತು . ಸಮಾರೋಪ ಸಮಾರಂಭದಲ್ಲಿ ಚಿತ್ರ ನಟ ಸ್ಮೈಲ್ ಶಿವು ಹಾಗೂ ಕಾಸಿಯಾದ ಗೌರವ ಕಾರ್ಯದರ್ಶಿ, ಉದ್ಯಮಿ ಸುರೇಶ್ ಎನ್. ಸಾಗರ್ ವೇದಿಕೆಯಲ್ಲಿದ್ದು, ವಿಜೇತರಿಗೆ ಬಹುಮಾನ ವಿತರಿಸಿದರು.

ಮುಳಿಯ ಪ್ರಬಂಧಕರಾದ ಎನ್.ಸುಬ್ರಮಣ್ಯ ಭಟ್, ಸಂಜೀವ, ಶಾಮ್, ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು