ಇತ್ತೀಚಿನ ಸುದ್ದಿ
ಬೆಂಗಳೂರು: ಅಕಾಲಿಕ ಗಾಳಿ- ಮಳೆಗೆ 3 ವರ್ಷದ ಹೆಣ್ಣುಮಗು ಬಲಿ; ತಂದೆ ಜತೆ ಬೈಕಿನಲ್ಲಿ ಹೋಗುತ್ತಿದ್ದಾಗ ಬಿದ್ದ ಮರ
23/03/2025, 11:58

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುರಿದ ಅಕಾಲಿಕ ಗಾಳಿ- ಮಳೆಗೆ 3 ವರ್ಷದ ಹೆಣ್ಣು ಮಗು ಬಲಿಯಾದ ದಾರುಣ ಘಟನೆ ನಡೆದಿದೆ.
ರಾಜಧಾನಿಯಲ್ಲಿ ಶನಿವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಮರ ಬೈಕ್ ಮೇಲೆ ಮುರಿದು ಬಿದ್ದ ಪರಿಣಾಮ ರಕ್ಷಾ(3) ಕೊನೆಯುಸಿರೆಳೆದಿದ್ದಾಳೆ.
ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ಈ ದುರ್ಘಟನೆ ನಡೆದಿದೆ.
ಮರ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಫೋಷಕರು ತಕ್ಷಣ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ತಂದೆಯ ಜೊತೆ ಮಗು ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.