ಇತ್ತೀಚಿನ ಸುದ್ದಿ
ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
02/01/2025, 20:24
ಬೆಂಗಳೂರು(reporterkarnataka.com): ನಗರದ ಮಹದೇವಪುರ ಬಳಿಯ ಬೈಕ್ ಶೋರೂಮ್ ವೊಂದರಲ್ಲಿ ಆಕಸ್ಮಿಕ ಅಗ್ನಿ ಅನಾಹುತಕ್ಕೆ 60ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ.
ಬುಧವಾರ ರಾತ್ರಿ ಶೋರೂಂ ಮುಚ್ಚಿದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಪಕ್ಕದ ಶೋರೂಂಗೆ ಹಬ್ಬುವ ಮುನ್ನ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.