11:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂಗಳೂರು: ಬ್ಯಾರೀಸ್ ಸೆಂಟ್ರಲ್ ಕಮಿಟಿ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ನಿಂದ ಬೃಹತ್ ರಕ್ತದಾನ ಶಿಬಿರ

12/08/2024, 07:31

ಬೆಂಗಳೂರು(reporterkarnataka.com): ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆ ಜಿ ಸರ್ಕಲ್ ಬಳಿ ನಡೆಯಿತು.
ಮುಂಜಾನೆಯಿಂದ ಮಧ್ಯಾಹ್ನದ ತನಕ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರು ಬಹಳ ಉತ್ಸಾಹದಿಂದಲೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದರು. ತುರ್ತು ಕರೆಗೆ ತಕ್ಷಣವೇ ಸ್ಪಂದಿಸಿ ಸಿಂಗಲ್ ಡೋನರ್ ಪ್ಲೇಟ್ಲೆಟ್ ರಕ್ತವನ್ನು ದಾನ ಮಾಡಿದ ಸಾಮಾಜಿಕ ಕಾರ್ಯಕರ್ತ ರಹೀಮ್ಚಿಕ್ಕಪೇಟೆ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಧ್ಯಕ್ಷರಾದ ಉದ್ಯಮಿ ಶಬೀರ್ ಬ್ರಿಗೇಡ್, ಬಿಸಿಸಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ನ್ಯಾಯವಾದಿಗಳಾದ ಅಥಾವುಲ್ಲಾ ಪುಂಜಾಲಕಟ್ಟೆ, ಬಿಸಿಸಿಯ ವೇದ್ಯಕೀಯ ಉಸ್ತುವಾರಿ ಬದ್ರುದ್ದೀನ್, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಗೌರವಾಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ, ಅಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಬಿಡಿಎಂ ಉಪಾಧ್ಯಕ್ಷರಾದ ಅಶ್ರಫ್ ಸಿ. ಎಂ., ಪ್ರಧಾನ ಕಾರ್ಯದರ್ಶಿಗಳಾದ ಶಾಹುಲ್ ಹಮೀದ್ ಕಾಶೀಪಟ್ನ ಹಾಗೂ ಬ್ಯಾರೀಸ್ ಸೆಂಟ್ರಲ್ ಕಮಿಟಿ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು