9:11 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಬೆಂಗಳೂರು: 68 ಪರಿಸರಸ್ನೇಹಿ ವಾಹನಕ್ಕೆ ಮುಖ್ಯಮಂತ್ರಿ ಚಾಲನೆ

06/10/2025, 19:53

ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ: ಖಂಡ್ರೆ

ಹಸಿರು ಪಟಾಕಿ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ

ಬೆಂಗಳೂರು(reporterkarnataka.com): ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.


ವಿಧಾನಸೌಧದ ಮೆಟ್ಟಿಲುಗಳ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಡಳಿಯ ಅಧ್ಯಕ್, ನರೇಂದ್ರ ಸ್ವಾಮಿ ಅವರೊಂದಿಗೆ 68 ಪರಿಸರ ಸ್ನೇಹಿ(ಇವಿ) ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.
15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ 68 ಇವಿ ವಾಹನಗಳಿಗೆ ಮಂಡಳಿ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಈ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಂಡಳಿಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು