2:39 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬೆಂಗಳೂರು; 2 ದಿನಗಳ ಪ್ರವಾಸದ ಬಳಿಕ ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ನಿರ್ಗಮನ; ಆತ್ಮೀಯ ಬೀಳ್ಕೊಡುಗೆ

05/04/2025, 23:45

ಬೆಂಗಳೂರು (reporterkarnataka.com): ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಶನಿವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.


ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಭಾರತ ಸರ್ಕಾರ ಸಚಿವಾಲಯದ ಚಿಲಿ ರಾಯಭಾರಿ ಅಭಿಲಾಶ ಜೋಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ. ಜಿ, ಭಾರತ ಸರ್ಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ. ಪ್ರಪುಲ್ಲಚಂದ್ರ.ಎಸ್., ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತರಾದ ರಮೇಶ್. ಬಿ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಬಸಬರಾಜು.ಎ.ಬಿ., ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಗಳಾದ ಅಜಿತ್ ಜಾನ್ ಜೋಸ್ವಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು