11:13 PM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಬೆಂಗಳೂರು ಕೂಲ್ ಕೂಲ್: ಶೀತ ಮಾರುತದಿಂದ ತತ್ತರಿಸಿದ ರಾಜಧಾನಿ ಜನತೆ: ಉತ್ತರ ಕರ್ನಾಟಕದಲ್ಲೂ ಗಡಗಡ ಚಳಿ

20/12/2025, 23:12

ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಮಾರುತ ತೀವ್ರಗೊಂಡಿದ್ದು, ಇನ್ನೆರಡು ದಿನ ಮುಂದುವರಿಯುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಕವಿದಿದ್ದು, ಬೆಳಗ್ಗಿನ ಪ್ರಯಾಣದ ಮೇಲೆ ಪರಿಣಾಮ ಬೀರಿದೆ. ಜನರು ಶೀತ ಮಾರುತದಿಂದ ಸಂಕಷ್ಟ ಅನುಭವಿಸಬೇಕಾಯಿತು.
ಉತ್ತರ ಕರ್ನಾಟಕದ ಹಲವು‌ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಮನಾರ್ಹ ಇಳಿಕೆ ಕಂಡಿದೆ. ಬೆಳಗಾವಿ, ವಿಜಯಪುರ ಶೀತ ಮಾರುತದ ಬಾಧೆಗೆ ಒಳಗಾಗಿದೆ. ಮುಂಜಾನೆ ಸಮಯದಲ್ಲಿ ಮನೆಯೊಳಗೆ ಬೆಚ್ಚಗಿರಲು ಮತ್ತು ಜಾಗರೂಕರಾಗಿರಲು ನಿವಾಸಿಗಳಿಗೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಸಿಯಸ್ ತಲುಪಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು