ಇತ್ತೀಚಿನ ಸುದ್ದಿ
ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ
19/11/2025, 21:01
ಬೆಂಗಳೂರು(reporterkarnataka.com): ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.











ಇದೇ ಸಂದರ್ಭದಲ್ಲಿ, ಇಂದಿರಾ ಗಾಂಧಿ ಅವರ ಆಯ್ದ ನುಡಿಮುತ್ತುಗಳ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಬರೆದಿರುವ ಪುಸ್ತಕವನ್ನು ಡಿ ಕೆ ಶಿವಕುಮಾರ್ ಅವರು ಕನ್ನಡಕ್ಕೆ ತರ್ಜುಮೆ ಮಾಡಿರುವ ಕೃತಿಯನ್ನು ಸಿಎಂ ಬಿಡುಗಡೆ ಮಾಡಿದರು. ಹಿರಿಯ ನಾಯಕಿ ಬಿ ಟಿ ಲಲಿತಾ ನಾಯಕ್, ವಾಸಂತಿ ಶಿವಣ್ಣ, ಮುಮ್ತಾಜ್ ಬೇಗಂ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ರೆಡ್ಡಿ, ಬೆಂಗಳೂರು ಜಿಲ್ಲಾ ಸಮಿತಿಯ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತಿತರರು ಭಾಗವಹಿಸಿದ್ದರು.













