ಇತ್ತೀಚಿನ ಸುದ್ದಿ
ಬೆಂಗಳೂರು ಗಣರಾಜೋತ್ಸವ ಪೆರೇಡ್ ಗೆ ಮಂಗಳೂರು ವಿಶ್ವವಿದ್ಯಾಲಯದ 4 ಮಂದಿ ವಿದ್ಯಾರ್ಥಿಗಳು
25/01/2023, 22:53

ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ ನಡೆಯಲಿರುವ 2023 ಗಣರಾಜ್ಯೋತ್ಸವ ದಿನದ ಪಥ ಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜಯ 4 ಮಂದಿ ಸ್ವಯಂಸೇವಕರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಸುಳ್ಯ ಎನ್. ಎಂ. ಸಿ ಕಾಲೇಜಿನ ಜೋಸ್ಬಿನ್ ಬಾಬು, ಬೆಳ್ತಂಗಡಿ ಗುರು ದೇವ ಫಸ್ಟ್ ಗ್ರೇಡ್ ಕಾಲೇಜಿನ ತೇಜಸ್ ಪಿ., ಪುಂಜಾಲಕಟ್ಟೆ ಸರಕಾರಿ ಫಸ್ಟ್ ಗ್ರೇಡ್ ಕಾಲೇಜಿನ ದೀಕ್ಷಾ ಹಾಗೂ ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ಅಶ್ವಿನಿ ಆಯ್ಕೆಯಾಗಿದ್ದಾರೆ.
ಮಂಗಳೂರು ವಿಶ್ವ ವಿದ್ಯಾನಿಲಯದ ರಾ.ಸೇ.ಯೋ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.