ಇತ್ತೀಚಿನ ಸುದ್ದಿ
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್; ಸೆಕೆಗೆ ತಾತ್ಕಾಲಿಕ ಮುಕ್ತಿ
18/05/2025, 23:14

ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಅಬ್ಬರ ಮುಂದುವರಿದಿದ್ದು, ಬೇಸಿಗೆ ತಾಪಕ್ಕೆ ಸ್ವಲ್ಪ ಮಟ್ಟಿಗೆ ಮುಕ್ತಿ ದೊರಕಿದೆ.
ನಗರದಲ್ಲಿ ಮುಂದಿನ ವಾರ ಪೂರ್ತಿ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಮೇ ಅಂತ್ಯದ ವೇಳೆಗೆ ಮುಂಗಾರು ಆಗಮಿಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ನಗರಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ಗರಿಷ್ಠ ತಾಪಮಾನವು ಸುಮಾರು 30 ಡಿಗ್ರಿಗಳಷ್ಟು ನೆಲೆಸುವ ನಿರೀಕ್ಷೆಯಿದೆ. ಭಾರೀ ಮಳೆಯಿಂದ ಟ್ರಾಫಿಕ್ ಅಡೆತಡೆಗಳಿಗೆ ಕಾರಣವಾಯಿತು. ಎಂ.ಜಿ. ರಸ್ತೆ, ರೆಸಿಡೆನ್ಸಿ ರಸ್ತೆ ಮತ್ತು ರಿಚ್ಮಂಡ್ ರಸ್ತೆಯಂತಹ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.