2:35 AM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

08/02/2025, 21:11

ಬೆಂಗಳೂರು(reporterkarnataka.com): ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.


ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು