8:41 PM Thursday20 - March 2025
ಬ್ರೇಕಿಂಗ್ ನ್ಯೂಸ್
ಅಂಗನವಾಡಿ: 2011ರ ನಂತರ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ; ಸಿಎಂ ಜೊತೆ ಚರ್ಚಿಸಿ ಕ್ರಮ: ಸಚಿವೆ… Legislative Council | ಜಲ‌ ಮತ್ತು ವಾಯು ಕಾಯ್ದೆ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ… ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ.… Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ… ಬೆಂಗಳೂರು: 20ರಿಂದ 4 ದಿನಗಳ ಕಾಲ ಲೇಸರ್ ಚಿಕಿತ್ಸೆ, ಸರ್ಜರಿ ಅಂತಾರಾಷ್ಟ್ರೀಯ ಸಮ್ಮೇಳನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; ಬೇಡಿಕೆ… ರಾಜ್ಯದ ನೀರಾವರಿ ಯೋಜನೆಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಬೊಮ್ಮಾಯಿ: ಕೃಷ್ಣಾ ಮೇಲ್ದಂಡೆ, ಮಹಾದಾಯಿ… APMC | ಯಶವಂತಪುರದಿಂದ 4 ಕೃಷಿ ಉತ್ಪನ್ನ ಶಿಫ್ಟ್: ದಾಸನಪುರ ಉಪ ಮಾರುಕಟ್ಟೆಗೆ… ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Farmers Loan | ಅರ್ಹತೆ ಇರುವ ರೈತ ಫಲಾನುಭಗಳಿಗೆ ಸಾಲ ಸೌಲಭ್ಯ: ವಿಧಾನ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

08/02/2025, 21:11

ಬೆಂಗಳೂರು(reporterkarnataka.com): ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.


ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು