4:07 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ನೀಡಿ ರಕ್ಷಣಾ ಸಚಿವ ರಾಜನಾಥ್ ಸಿಂಗ್

11/02/2025, 20:39

ಬೆಂಗಳೂರು(reporterkarnataka.com): ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಮೆಚ್ಚುಗೆಯ ಮಾತು ಮತ್ತು ಅದಮ್ಯ ಭರವಸೆಯ ಮೂಲಕ ಅವರು ಮಂಗಳವಾರ ಇಲ್ಲಿ `ಜಾಗತಿಕ ಹೂಡಿಕೆದಾರರ ಸಮಾವೇಶ’ವಾದ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಚಾಲನೆ ನೀಡಿದರು. ಫೆ.14ರವರೆಗೆ ನಡೆಯಲಿರುವ ಸಮಾವೇಶದಲ್ಲಿ ಜಗತ್ತಿನ ನಾನಾ ಭಾಗಗಳ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.
ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ. ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು ಎತ್ತರಕ್ಕೆ ಕೊಂಡೊಯ್ಯುತ್ತಿವೆ. ಇಲ್ಲಿಂದ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಕ್ಷೇತ್ರದ ಪ್ರಪ್ರಥಮ ಮಾದರಿ ಕೂಡ ಹೊರಬರಲಿದೆ . ಇದಕ್ಕೆಲ್ಲ ಇಲ್ಲಿರುವ ಮಾನವ ಸಂಪನ್ಮೂಲ ಮತ್ತು ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಬಹಳ ಮುಖ್ಯ. ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ತೊಂದರೆ ಎದುರಾಗುತ್ತಿತ್ತು, ಆದರೆ ಈಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ. ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ. ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಮಾಡುತ್ತಿದೆ ಎಂದು ರಾಜನಾಥ್ ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು