3:35 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬೆಂಗಳೂರು ಕಂಬಳ ನೋಡಿ ವಾಪಸ್‌ ಬರುತ್ತಿದ್ದಾಗ ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಮಂಗಳೂರಿನ ಇಬ್ಬರು ಸಾವು; 3 ಮಂದಿಗೆ ತೀವ್ರ ಗಾಯ

26/11/2023, 11:42

ಬೆಂಗಳೂರು (reporterkarnataka.com): ಬೆಂಗಳೂರು ಕಂಬಳ ನೋಡಿ ವಾಪಸ್ ಆಗುತ್ತಿದ್ದವರು ಎನ್ನಲಾದ ಮಂಗಳೂರಿನ ಇಬ್ಬರು ಕುಣಿಗಲ್ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ.
ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಬೋರ್ ವೆಲ್ ಲಾರಿ ಹಾಗೂ ಕಾರು ನಡುವಿನ ಅಪಘಾತದಲ್ಲಿ ಮೃತರನ್ನು ಮಂಗಳೂರು ಸಮೀಪದ ಬಜಪೆ ಮೂಲದ ಕಿಶನ್ ಶೆಟ್ಟಿ( 20 ) ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ನಿತೀಶ್ ಭಂಡಾರಿ, ಪ್ರೀತಿ ಲೋಬೋ ಹಾಗೂ ಹರೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ಕಾರಿನಲ್ಲಿ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಬೋರ್ ವೆಲ್
ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು