4:22 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ತೀವ್ರ ತಪಾಸಣೆ

20/05/2022, 14:37

ಬೆಂಗಳೂರು (reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ನಸುಕಿನ ವೇಳೆ ಹುಸಿ ಬಾಂಬ್ ಬೆದರಿಕೆಯ ಕರೆ ಬಂದಿರುವ ಘಟನೆ ನಡೆದಿದೆ.

ಅನಾಮಧೇಯ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ 

ಎಂದು ಹೇಳಿದ್ದ. ಬೆಳಗಿನ ಜಾವ 3.30ಕ್ಕೆ ಕಾಲ್ ಮಾಡಿದ ವ್ಯಕ್ತಿ ತಕ್ಷಣ ಕಾಲ್ ಕಟ್  ಮಾಡಿದ್ದ. ಇದರಿಂದ ಕೆಲವು ತಾಸು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿತ್ತು. 

ಬಾಂಬ್ ಬೆದರಿಕೆ ಕರೆಯ ವಿಚಾರವನ್ನು ಕಂಟ್ರೋಲ್ ರೂಂ ಪೊಲೀಸರು ಏರ್ ಪೋರ್ಟ್ ಪೊಲೀಸರಿಗೆ ರವಾನಿಸಿದ್ದರು. ತಕ್ಷಣ

ಬಾಂಬ್ ನಿಷ್ಟ್ರಿಯ ದಳದೊಂದಿಗೆ ಪೊಲೀಸರು ಸತತ 2 ತಾಸುಗಳ ಕಾಲ ತಪಾಸಣೆ ನಡೆಸಿದ್ದಾರೆ. 

ಆದರೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.ಹೀಗಾಗಿ ಇದೊಂದು ಹುಸಿಬಾಂಬ್ ಕರೆ ಎನ್ನಲಾಗಿದೆ. ಆದರೂ ತೀವ್ರ ಎಚ್ಚರಿಕೆ ವಹಿಸಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಚಿಂಚು ತಪಾಸಣೆಯನ್ನು ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು