10:01 AM Thursday1 - October 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬೆಂಗಳೂರು ಮಳೆ ಅನಾಹುತ: 2 ದಿನಗಳಲ್ಲಿ 691 ಮಂದಿ ಸಂತ್ರಸ್ತರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ

24/05/2022, 08:13

ಬೆಂಗಳೂರು(reporterkarnataka.com): ಮಳೆಹಾನಿ ಸಂತ್ರಸ್ತರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ದಾವೋಸ್ ನಿಂದ ಸಚಿವ ಅಶ್ವತ್ಥನಾರಾಯಣ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, 2 ದಿನಗಳಲ್ಲಿ 691 ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವಂತೆ ಸೂಚನೆ ನೀಡಿದ್ದಾರೆ. 

691 ಕುಟುಂಬಗಳಿಗೆ 1.73 ಕೋಟಿ ರೂಪಾಯಿಯನ್ನು ಸಂತ್ರಸ್ತರ ಖಾತೆಗೆ ವರ್ಗಾವಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ಥರ ಸಂಬಂಧಿಸಿದ ದಾಖಲೀಕರಣವನ್ನು ಮಂಗಳವಾರದೊಳಗೆ ಪೂರ್ಣಗೊಳಿಸಿ ಬುಧವಾರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವಂತೆ ಕಾಲಮಿತಿ ನಿಗದಿಪಡಿಸಿದ್ದಾರೆ.

ಪೂರ್ವ ವಲಯದಲ್ಲಿ 7 ಕಡೆ ಡೀಸಿಲ್ಟಿಂಗ್ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಕ್ಷಣ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದು, 20 ದಿನಗಳೊಳಗೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀಲಸಂದ್ರ, ಸಂಜಯನಗರ ಸೇರಿದಂತೆ 22 ರೆಡ್ ಜೋನ್ ನಗಳಲ್ಲಿ ಸ್ಥಳಾಂತರಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು