10:33 AM Sunday18 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬೆಂಗಳೂರು: ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ; ದಾಖಲೆ ಪರಿಶೀಲಿಸಿದ ಅಧಿಕಾರಿಗಳು

07/09/2022, 13:32

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಬುಧವಾರ ಬೆಳಗ್ಗೆ ಐಟಿ ಅಧಿಕಾರಿಗಳು  ದಾಳಿ ನಡೆಸಿದ್ದು, ತೆರಿಗೆ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಆದಾಯ ತೆರಿಗೆ ಅಧಿಕಾರಿಗಳು ಇಂದು ಬೆಳಗ್ಗೆ 6:30ರ ಸುಮಾರಿಗೆ ಏಕಕಾಲಕ್ಕೆ ನಗರದ 10ಕ್ಕೂ ಅಧಿಕ ಮಣಿಪಾಲ್ ಆಸ್ಪತ್ರೆಗಳ‌ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ. 

ಎಚ್ ಎಎಲ್ ಬಳಿಯಿರೋ ಮಣಿಪಾಲ್ ಆಸ್ಪತ್ರೆಗೆ ಬೆಳಗಿನ ಜಾವ 6:30ಕ್ಕೆ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ ನಡುವೆ ಉಡುಪಿಯಲ್ಲಿರುವ ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗಕ್ಕೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು