ಇತ್ತೀಚಿನ ಸುದ್ದಿ
ಬೆಂಗಳೂರು ನಗರದಾದ್ಯಂತ ಇಂದು 144 ಸೆಕ್ಷನ್ ನಿಷೇಧಾಜ್ಞೆ ಜಾರಿ
15/03/2022, 10:05
ಬೆಂಗಳೂರು(reporterkarnataka.com): ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಿಜಾಬ್ ವಿವಾದದ ಅರ್ಜಿಯ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು, ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯಾಧ್ಯಂತ ಶಾಲಾ-ಕಾಲೇಜುಗಳ ಬಳಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಎಲ್ಲಾ ಡಿಸಿಪಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ರಾತ್ರಿ 10.30ಕ್ಕೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನಗರದಲ್ಲಿನ ಶಾಲಾ-ಕಾಲೇಜುಗಳ ಬಳಿಯಲ್ಲಿ ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ. ಅಲ್ಲದೇ ಬೆಂಗಳೂರು ನಗರಾದ್ಯಂತ ನಾಳೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇನ್ನೂ ರಾತ್ರಿ 8.30ಕ್ಕೆ ಆಯಾ ಜಿಲ್ಲೆಗಳಲ್ಲಿಯೂ ಡಿಸಿ, ಎಸ್ಪಿಗಳು ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೂಚನೆ ನೀಡಲಾಗುತ್ತಿದೆ.