5:02 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಬೆಂಗಳೂರು ನಗರದಲ್ಲಿ ಸರಕಾರವನ್ನು ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್‌: ಕೇಸ್ ದಾಖಲು 

21/09/2022, 17:02

ಬೆಂಗಳೂರು(reporterkarnataka.com): ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್‌ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್‌ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ಮುಖ್ಯಮಂತ್ರಿಗಳು ವರದಿ ಕೇಳಿಲ್ಲ. ಕೇಂದ್ರ ವಿಭಾಗದ ಪೊಲೀಸರು ಈ ಸಂಬಂಧ ಬರುವ ದೂರುಗಳನ್ನು ಪಡೆದು ತನಿಖೆಯನ್ನು ‌ನಡೆಸಲಿದ್ದಾರೆ ಎಂದರು.

ಪೇಟಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ವರದಿ ಕೇಳಿದರೆ ಮಾಹಿತಿ‌ ಸಂಗ್ರಹಿಸಿ ತನಿಖೆಯನ್ನು ‌ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು