6:26 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು…

ಇತ್ತೀಚಿನ ಸುದ್ದಿ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ  ರಾಯಿಟರ್ಸ್ ಸಂಸ್ಥೆಯ ಪತ್ರಕರ್ತೆಯ ಮೃತದೇಹ ಪತ್ತೆ; ಕೊಲೆ ಶಂಕೆ

24/03/2022, 12:52

ಬೆಂಗಳೂರು(reporterkarnataka.com):  ರಾಯಿಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆಯೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೃತಪಟ್ಟವರನ್ನು ಪತ್ರಕರ್ತೆ ಶ್ರುತಿ (35) ಎಂದು ಗುರುತಿಸಲಾಗಿದೆ.

ಶ್ರುತಿ ಹಾಗೂ ಅನೀಶ್ ವಿವಾಹ 2017ರಲ್ಲಿ ಆಗಿತ್ತು.ಬೆಂಗಳೂರಿಗೆ ಮರಳಿದ್ದ ದಂಪತಿ ವೈಟ್ ಫೀಲ್ಡ್ ನ ನಲ್ಲೂರುಹಳ್ಳಿ ರಸ್ತೆ ಬಳಿಯ ಎಸ್.ವಿ.ಮೈಪೇರ್ ವಸತಿ ಸಮುಚ್ಚಯದ ಫ್ಲ್ಯಾಟ್ನಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್, ಪ್ರತಿನಿತ್ಯ ಶ್ರುತಿಗೆ ಚಿತ್ರಹಿಂಸೆ ನೀಡುತ್ತಿದ್ದ. ಸಂಬಳದ ಹಣವನ್ನೆಲ್ಲಾ ತವರು ಮನೆಗೆ ನೀಡುತ್ತೀಯಾ ಎಂದು ಹೇಳಿ ಹಲ್ಲೆ ನಡೆಸುತ್ತಿದ್ದ. ಒಮ್ಮೊಮ್ಮೆ ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಸಹೋದರ ನಿಶಾಂತ್ ನಾರಾಯಣನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು