2:38 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಬೆಂಗಳೂರು: ಜು. 7ರಂದು ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರ ಬೃಹತ್ ಪ್ರತಿಭಟನೆ

03/07/2025, 16:08

ತುಮಕೂರು(reporterkarnataka.com): ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ತುಮಕೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ತುಮಕೂರು ಜಿಲ್ಲಾ ಘಟಕದ ವತಿಯಿಂದ ಮಾಧ್ಯಮಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಎ.ಅಮೃತ್ ರಾಜ್ ಈ ವಿಷಯ ತಿಳಿಸಿದರು.
ರಾಜ್ಯದ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂದಿಸದೆ ಇರುವುದರಿಂದ ಜುಲೈ 7ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ನುಡಿದರು.
7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುದಾನವನ್ನು ಬಿಡುಗಡೆ ಮಾಡಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.
ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.
ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸಬೇಕು.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಬೃಹತ್ ಪ್ರತಿಭಟನೆಯನ್ನು ಜುಲೈ 7ರಂದು ಸ್ವಾತಂತ್ರ್ಯ ಉದ್ಯಾನವನ(ಫೀಡಂ ಪಾರ್ಕ್)ನಲ್ಲಿ ರಾಜ್ಯದ 10 ಮಹಾನಗರ ಪಾಲಿಕೆ ಸಾವಿರಾರು ಅಧಿಕಾರಿ, ನೌಕರರು ಭಾಗವಹಿಸಲಿದ್ದಾರೆ.
ಗೌರವಾಧ್ಯಕ್ಷರಾದ ಎಸ್.ಎಚ್.ಗುರುಮೂರ್ತಿ, ರಾಜ್ಯ ಉಪಾಧ್ಯಕ್ಷರುಗಳಾದ ಜಿ.ವೆಂಕಟ್ ರಾಮ್, ವೇಣುಗೋಪಾಲ್ ಬಿ.ಎನ್. ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಸಿ.ಬಸವರಾಜಯ್ಯ, ಖಜಾಂಚಿ ರುದ್ರೇಶ್ ಬಿ ಹಾಗೂ ರಾಜ್ಯ ಕಾರ್ಯದರ್ಶಿ ಪ್ರಹ್ಲಾದ್ ಕುಲಕರ್ಣಿ, ರಾಜ್ಯ ನಿರ್ದೇಶಕರುಗಳಾದ ಸಾಯಿಶಂಕರ್, ಜಗದೀಶ್ ಎಸ್, ಎ.ಜಿ.ಬಾಬು, ಶ್ರೀನಿವಾಸ್ ಕಟ್ಟಿ, ಬಾಬು ಪಿ, ನರಸಿಂಹ ಕೆ, ಶಾಂತಪ್ಪ ಮುಖೇಶಪ್ಪ ಪತ್ತಾರ, ರವೀಂದ್ರ ಶಿರಶ್ಯಾದ ಮತ್ತು 10 ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು