8:12 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಬೆಂಗಳೂರು : ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅನುವು ?

05/07/2022, 15:35

ಬೆಂಗಳೂರು (Reporterkarnataka.com) ಬೆಂಗಳೂರಿನ ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ತಜ್ಞರು ನಿರ್ಧರಿಸಿದ್ದಾರೆ. ಆದರೆ 20 ಟನ್‌ಗಿಂತ ಹೆಚ್ಚಿನ ಪ್ರಮಾಣದ ಸರಕು ಸಾಗಣೆಯ ವಾಹನಗಳಿಗೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯವೂ ಕೇಳಿ ಬರುತ್ತಿದೆ.

ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಮೇಲ್ಸೇತುವೆ ಪ್ರಾರಂಭವಾಗುವ ಗೊರಗುಂಟೆ ಪಾಳ್ಯ ಭಾಗದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ.

ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯ ಎಂಟನೇ ಮೈಲಿ ಸಮೀಪ ಕೆಲ ಕೇಬಲ್‌ಗಳು ಹಾನಿಗೊಳಗಾಗಿದ್ದರಿಂದ ಕಳೆದ ಆರು ತಿಂಗಳಿಂದ ಭಾರೀ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿಷೇಧಿಸಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಹಲವು ಪರೀಕ್ಷೆ ನಡೆಸಿದ್ದರು. ಬಳಿಕ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಹೆಚ್ಚಿನ ಪರೀಕ್ಷೆ ನಡೆಸಿದ ಬಳಿಕವಷ್ಟೇ ಭಾರೀ ವಾಹನಗಳಿಗೆ ಪ್ರವೇಶ ಕಲ್ಪಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು