ಇತ್ತೀಚಿನ ಸುದ್ದಿ
ಬೆಂಗಳೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ, ದಟ್ಟ ಹೊಗೆ
19/08/2023, 10:27
ಬೆಂಗಳೂರು(reporterkarnataka.com): ನಗರದ ಹೃದಯಭಾಗದಲ್ಲಿರುವ ಮೆಜೆಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ ಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲಿ ಹೊಗೆ ಆವರಿಸಿದೆ.
ನಿಲ್ದಾಣದಲ್ಲಿ ಪ್ರಯಾಣಿಕರು ರೈಲಿನಿಂದ ಇಳಿದು ಸುಮಾರು 2 ತಾಸುಗಳ ಬಳಿಕ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸ್ಥಳಕ್ಕೆ ಧಾವಿಸಿದೆ.