3:42 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ…

ಇತ್ತೀಚಿನ ಸುದ್ದಿ

ಬೆಂಗಳೂರು ಸಹಿತ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ‘ಅಗ್ನಿವೀರ’ ಅವಕಾಶ: ಆ.10ರಿಂದ ಹಾಸನದಲ್ಲಿ ಭೂ ಸೇನಾ Rally

02/07/2022, 15:28

ಹಾಸನ(reporterkarnataka.com): ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ  ಅಗ್ನಿವೀರ ನೇಮಕಾತಿ ನಡೆಯಲಿದೆ.  ‘ಅಗ್ನಿಪಥ’ ಯೋಜನೆಯಡಿ ಭೂ ಸೇನಾ Rally ನಡೆಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಜನರಲ್ ಡ್ಯೂಟಿ, ಅಗ್ನಿವೀರ ತಾಂತ್ರಿಕ ನೇಮಕಾತಿ ಜೊತೆಗೆ 8ನೇ ತರಗತಿ ಮತ್ತು 10ನೇ ತರಗತಿ ಉತ್ತೀರ್ಣವಾಗಿರುವವರಿಗೆ ಅಗ್ನಿವೀರ ಕುಶಲಕರ್ಮಿ, ಅಗ್ನಿವೀರ ಕ್ಲರ್ಕ್ ಮತ್ತು ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಆನ್ಲೈನ್ ಮೂಲಕ ನೋಂದಣಿ ಕಡ್ಡಾಯವಾಗಿದ್ದು, ಜುಲೈ 1ರಿಂದ ಜುಲೈ 30ರವರೆಗೆ https//joinindianarmy.nic.in ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಡ್ಮಿಟ್ ಕಾರ್ಡ್ ಗಳನ್ನು ನೋಂದಣಿ ವೇಳೆ ನೀಡಲಾದ ಇಮೇಲ್ ವಿಳಾಸಕ್ಕೆ ಆಗಸ್ಟ್ 1ರಿಂದ ಆಗಸ್ಟ್ 7ರ ಮಧ್ಯೆ ಕಳುಹಿಸಿಕೊಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು