10:34 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಶಂಕಿತ ಲಷ್ಕರ್‌ ಉಗ್ರ ಸೆರೆ:  ಪತ್ನಿ, ಮಕ್ಕಳ ಜತೆ ವಾಸ; ಸಿಸಿಬಿ ಪೊಲೀಸರ ಕಾರ್ಯಾಚರಣೆ

25/07/2022, 15:19

ಬೆಂಗಳೂರು(reporterkarnataka.com):.ನಗರದ ತಿಲಕ್ ನಗರ ಪ್ರದೇಶದಲ್ಲಿ ವಾಸವಿದ್ದ ಶಂಕಿತ ಲಷ್ಕರ್‌ ಭಯೋತ್ಪಾದಕನನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ತಿಲಕ್ ನಗರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಅಖ್ತರ್ ಹುಸೇನ್ ಎಂದು ಗುರುತಿಸಲಾಗಿದ್ದು, ಅಸ್ಸಾಂನಲ್ಲಿ ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸಿಸಿಬಿ ಪೊಲೀಸರು ಹುಸೇನ್‌ ವಾಸವಿದ್ದ ತಿಲಕ್‌ನಗರದ ಬಿಟಿಪಿ ಪ್ರದೇಶದ ಕಟ್ಟಡದ ಮೇಲೆ ದಾಳಿ ನಡೆಸಿದ್ದಾರೆ. ಆತ ಕೆಲವು ಯುವಕರೊಂದಿಗೆ ಕಟ್ಟಡದ ಮೂರನೇ ಮಹಡಿಯಲ್ಲಿ ವಾಸವಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಹುಸೇನ್‌ನನ್ನು ಬಂಧಿಸಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ  ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಕಳೆದ ತಿಂಗಳು, ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿಯೇ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ತಾಲಿಬ್‌ ಹುಸೇನ್‌ ನನ್ನು ಬಂಧಿಸಲಾಗಿತ್ತು. ಆತ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ನಗರದ ಓಕಳಿಪುರಂನಲ್ಲಿ ಕಳೆದ ಆರು ವರ್ಷಗಳಿಂದ ವಾಸವಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು