ಇತ್ತೀಚಿನ ಸುದ್ದಿ
ಬೆಂಗಳೂರು: ಸ್ನೇಹಿತನ ಬೈಕ್‌ನಲ್ಲಿ ಪಿಕ್‌ನಿಕ್‌ಗೆ ಹೋಗಿದ್ದ ಯುವತಿ ರಸ್ತೆ ಅಪಘಾತಕ್ಕೆ ಬಲಿ
17/09/2022, 19:39
ಬೆಂಗಳೂರು (reporterkarnataka.com): ಸ್ನೇಹಿತನ ಜತೆ ಬೈಕ್‌ನಲ್ಲಿ ಪಿಕ್‌ನಿಕ್‌ಗೆ ತೆರಳುತ್ತಿದ್ದ ಬೆಂಗಳೂರಿನ ಯುವತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್ ಬಳಿ ನಡೆದಿದೆ.
ಬೆಂಗಳೂರು ಮೂಲದ ಯುವತಿ ಚೈತ್ರಾ (19) ಮೃತಪಟ್ಟ ವಿದ್ಯಾರ್ಥಿನಿ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಚೈತ್ರಾ ತನ್ನ ಸ್ನೇಹಿತ ಲಿಖಿತ್ ಗೌಡನೊಂದಿಗೆ ಶ್ರೀನಿವಾಸ ಸಾಗರ ಜಲಾಶಯ ನೋಡಲು ತೆರಳಿದ್ದಾಳೆ. ಆದ್ರೆ, ಜಲಾಶಯ ನೋಡಿ ಬೆಂಗಳೂರಿನತ್ತ ವಾಪಾಸ್ಸಾಗುವಾಗ ಚೈತ್ರಾ ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಗುದ್ದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಚೈತ್ರಾ ಹಾಗೂ ಲಿಖಿತ್ ಗೌಡ ಹೈವೇಗೆ ಎಂಟ್ರೀ ಕೊಡುತ್ತಿದ್ದಂತೆಯೇ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾತಮ ಚೈತ್ರಾ ಸಾವನ್ನಪ್ಪಿದ್ದು, ಗೆಳೆಯ ಲಿಖಿತ್ ಗೌಡ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.














