6:34 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್‌ಗೆ ಓರಿಯಂಟೇಶನ್ ಕಾರ್ಯಕ್ರಮ

25/07/2024, 19:13

ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು.


ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅವರು ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿ, “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು ಆಂತರಿಕ ದೈವತ್ವವನ್ನು ನೀಡುತ್ತದೆ. ನೀವು ಏನು ಬೇಕಾದರೂ ಮಾಡಬಹುದು; ನಿಮಗೆ ನಂಬಿಕೆ ಇಲ್ಲದಿದ್ದಾಗ ಮಾತ್ರ ನೀವು ವಿಫಲರಾಗುತ್ತೀರಿ,” ಎಂದರು.
ಫಾ. ಡೆನ್ಜಿಲ್ ಅವರು ಸ್ನಾತಕೋತ್ತರ ಅಧ್ಯಯನದ ಸವಾಲುಗಳನ್ನು ಸ್ವೀಕರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಮಹತ್ವವನ್ನು ತಿಳಿ ಹೇಳಿದರು.
ಜಾಗತಿಕವಾಗಿ ಜೆಸ್ಯೂಟ್ ಸಂಸ್ಥೆಗಳ ಇತಿಹಾಸವನ್ನು ಪ್ರಸ್ತುತಪಡಿಸಿ, ಜೆಸ್ಯೂಟ್ ಶೈಕ್ಷಣಿಕ ತತ್ತ್ವಶಾಸ್ತ್ರವನ್ನು ವಿವರಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಕೊ ಅವರು ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ಮೋಹನದಾಸ SJU ನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ವಿವರಿಸಿದರು.
ವಿದ್ಯಾರ್ಥಿ ಸಂಯೋಜಕರಾದ ಜಾನ್ ವಿಸ್ಟನ್, ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರಯೋಜನಗಳ ವಿವರವನ್ನು ನೀಡಿದರು. ಡಾ.ಮುಯಿನ್ ಪಾಷಾ ಅವರು ಗಣ್ಯರು, ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಓರಿಯಂಟೇಶನ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು