11:58 AM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

01/07/2025, 20:07

ಬೆಂಗಳೂರು(reporterkarnataka.com): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯ ಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ:ಸಿಎಂ*
ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು. ಎಂದರು.

*ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ:*
ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು