ಇತ್ತೀಚಿನ ಸುದ್ದಿ
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ ಸಲ್ಲಿಕೆ
11/07/2025, 23:29

ಬೆಂಗಳೂರು(reporterkarnataka.com): ಚಿನ್ನಸ್ವಾಮಿ ಕ್ರೀಡಾಂಗಣ ಮುಂಭಾಗದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ಆಯೋಗದ ವರದಿಯನ್ನು ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ಅವರು ವಿಧಾನ ಸೌಧದ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.