10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಲ್ತುಳಿತ: ಮೃತ ಶಿವಲಿಂಗನ‌ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ

09/06/2025, 23:35

ಶಿವು ರಾಠೋಡ ಯಾದಗಿರಿ

info.reporterjarnataka@gmail.cm

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು 25 ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮಿ, ಅಣ್ಣ ಹೊನ್ನಪ್ಪ ಅವರನ್ನು ಸಚಿವರು ಮಾತಾಡಿ ಘಟನೆ ಬಗ್ಗೆ ವಿಷಾದ ವ್ಯಕ್ತ ಪಡಿಸಿ ಮಗನನ್ನು ತಂದು ಕೊಡಲು ಯಾರಿಂದಲ್ಲೂ ಸಾಧ್ಯವಿಲ್ಲ. ಕಾರಣ ಇನ್ನೊಬ್ಬ ಮಗ ಹೊನ್ನಪ್ಪನಲ್ಲಿಯೇ ಶಿವಲಿಂಗನನ್ನು ಕಾಣುವ ಮೂಲಕ ನೆಮ್ಮದಿ ಜೀವನ ನಡೆಸಿರಿ. ಹಣದ ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.
ನಡೆಯಬಾರದ್ದು ನಡೆದಿದೆ ವಿಧಿಯಾಟ, ಎದೆಗುಂದದೆ ಬದುಕು ಸಾಗಿಸಿ, ನಿಮ್ಮ ಇನ್ನೊಬ್ಬ ಮಗನಿಗೆ ಇಲ್ಲಿನ‌ ಮೆಡಿಕಲ್ ಕಾಲೇಜಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಕೊಡಿಸುವ ಭರವಸೆ ನೀಡಿದರು.
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ಸರ್ಕಾರದ ಈ ಪರಿಹಾರದ ಹಣ ಪೊಲಾಗಿಸದೆ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲಿ ಎಂದರು.
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನುರು, ಜಿಲ್ಲಾಧಿಕಾರಿ ಡಾ.ಸುಶೀಲಾ, ಹೆಚ್ಚುವರಿ ಡಿಸಿ ಶರಣಬಸಪ್ಪ ಕೋಟಪ್ಪಗೋಳ, ಎಸಿ ಡಾ.ಹಂಪಣ್ಣ ಸಜ್ಜನ್ ಸೇರಿದಂತೆಯೇ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು