10:14 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಗಣ್ಯವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ

22/06/2026, 23:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕೊಪ್ಪಳ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಆರು ಗಣ್ಯ ವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ರಚಿತವಾದ ‘ಸಮಾನತೆಯ ಬೆಳಕು’ ಡಾ. ಬಿ. ಆರ್. ಅಂಬೇಡ್ಕರ್ ಅವರ ನಡೆದ ಹಾದಿ ನುಡಿದ ಕವಿತೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪುಸ್ತಕದ ಲೇಖಕರಾದ ಶಫಿವುಲ್ಲಾ ಅವರಿಗೆ ಗಾನ ಗಂಧರ್ವ ಡಾ.ರಾಜ್ ಕುಮಾರ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆಯ ನಾಗರಾಜು, ಹಿರಿಯ ಶಿರಸ್ತೇದಾರರಾದ ರವಿ ಕುಮಾರ್, ಶಿರಸ್ತೇದಾರರಾದ ಸುರೇಶ ಕುಮಾರ್, ಶಿರಸ್ತೇದಾರರಾದ ಮಂಜುನಾಥ್ ಬೆಂಗಳೂರು,ಮತ್ತು ಹಜರತ್ ಅಲಿ,ಸಾಹಿತ್ಯಕರಾರು, ಗಾಯಕರು, ಚಲನಚಿತ್ರ ಸಂಗೀತ ನಿರ್ದೇಶಕರರಾದ ಎಂ. ಎಚ್. ಮರಿಸ್ವಾಮಿ, ರಂಗಭೂಮಿ ಕಲಾವಿದರು ಮದಕರಿಪುರ ಚಿತ್ರದುರ್ಗ, ಸತೀಶ್ ರಾಜ್, ನಟರು,ನಿರ್ದೇಶಕರು,ನಿರ್ಮಾಪಕರು,ಬೆಂಗಳೂರು,
ಎಸ್ ಕೆ ನಾಗೇಶ್, ರಂಗಭೂಮಿ ಕಲಾವಿದರು, ಮದ್ದೂರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು