1:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ

08/08/2022, 21:01

ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.

ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿತ್ತು. ಇದು ಕೆಲ ಹೊತ್ತು ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದರು. ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು