ಇತ್ತೀಚಿನ ಸುದ್ದಿ
ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಪಿಜಿ ವಿದ್ಯಾರ್ಥಿನಿ ನೇಣಿಗೆ ಶರಣು
03/02/2025, 22:33
![](https://reporterkarnataka.com/wp-content/uploads/2025/02/IMG-20250203-WA0024.jpg)
ಬೆಂಗಳೂರು(reporterkarnataka.com): ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು
ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಮೈಸೂರು ಜಿಲ್ಲೆಯವರಾದ ಬೆಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್. ಪಾವನ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿನಿ ಪಾವನ ಅವರು ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯರು ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಪಾವನ ಅವರು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದಾರೆ. ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್ನೋಟ್ ಬರೆದಿಟ್ಟು ಪಾವನ
ಸಾವಿಗೆ ಶರಣಾಗಿದ್ದಾರೆ.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಪೋಷಕರು ಬೆಂಗಳೂರಿಗೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.