11:14 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ

26/01/2022, 12:41

ಬೆಂಗಳೂರು(reporterkarnataka.com): ದೇಶದಲ್ಲಿಂದು 73ನೇ ಗಣರಾಜ್ಯೋತ್ಸವ ಸಂಭ್ರಮಿಸಲಾಗುತ್ತಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಟಿ.ಆರ್. ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ಬಳಿಕ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದು, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತಿದ್ದೇನೆ.

2021-22 ರಲ್ಲಿ ಜಗತ್ತು ಕೊರೋನಾ ಸವಾಲನ್ನು ನಿಭಾಯಿಸಲು ಕಷ್ಟಪಡುತ್ತಿರುವಾಗ ನಾವು ಈ ಹೋರಾಟವನ್ನು ಸಮರ್ಥವಾಗಿ ಹೋರಾಡಿದ್ದೇವೆ. ನವ ಚೈತನ್ಯ ಹಾಗೂ ಆಶೋತ್ತರಗಳೊಂದಿಗೆ 2022ಕ್ಕೆ ಹೆಜ್ಜೆ ಇರಿಸಿದ್ದೇವೆ.ನಮ್ಮ ಸರ್ಕಾರ ಕೋವಿಡ್ ವಿರುದ್ಧ ಹೋರಾಟಕ್ಕೆ ಹಗಲು ಇರುಳು ಎನ್ನದೆ ಶ್ರಮಿಸಿದೆ. ಎಲ್ಲರ ಸಹಕಾರದಿಂದ ಕೊರೋನಾ ತಗ್ಗಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು