8:41 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,…

ಇತ್ತೀಚಿನ ಸುದ್ದಿ

ಬೆಂಗ್ರೆ ಸ್ಯಾಂಡ್ಸ್ ಪಿಟ್ ಶಾಲೆ ಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 

22/06/2022, 15:44

ಮಂಗಳೂರು(reporterkarnataka.com): ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ, ಧರ್ಮಸ್ಥಳ ಶಾಂತಿವನ ಟ್ರಸ್ಟ್ , ಭಾರತ ಸೇವಾದಳ ಜಿಲ್ಲಾ ಸಮಿತಿ, ದ. ಕ. ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ಬೆಂಗ್ರೆಯ ಸ್ಯಾಂಡ್ಸ್ ಪಿಟ್
ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು.

ಕಾರ್ಯಕ್ರಮವನ್ನು  ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಕೇಶವ ಕರ್ಕೇರ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಸಂಪದ ಅಧ್ಯಕ್ಷ ಸಂಜಯ ಸುವರ್ಣ, ಭಾರತ ಸೇವಾದಳದ ಜಿಲ್ಲಾ ಸಂಘಟಕ ಟಿ.ಎಸ್‌ . ಮಂಜೇಗೌಡ ಆಗಮಿಸಿದ್ದರು.

ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಹೇಮಂತ ಕುಲಾಲ್ ಭಾಗವಹಿಸಿದ್ದರು.

ಶಾಲಾ ಶಿಕ್ಷಕಿ ಹಾಗೂ ಶಾಂತಿವನ ಟ್ರಸ್ಟ್ ಯೋಗ ಶಿಕ್ಷಕಿ   ಸುಮ  ಯೋಗ ತರಗತಿಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ  75 ನೇ ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ 75   ಕೋಟಿ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ದಿನಕ್ಕೆ12 ರಂತೆ 21 ದಿನಗಳ  ಕಾಲ ಸೂರ್ಯ ನಮಸ್ಕಾರ ಮಾಡಿದ ವಿದ್ಯಾರ್ಥಿಗಳಿಗೆ, ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮಿ ಕುಡುಪು ಸ್ವಾಗತಿಸಿದರು. ಶಿಕ್ಷಕಿ  ಉಷಾ.ಕೆ ವಂದಿಸಿದರು.

ಅತಿಥಿ ಶಿಕ್ಷಕಿ ಅಶ್ವಿನಿ , ಗೌರವ ಶಿಕ್ಷಕಿಯರಾದ ದೀಪಾ, ವರ್ಷಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು