11:04 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬೆಂಗ್ರೆ ಸಾಂಡ್ಸ್ ಪಿಟ್ ಶಾಲೆ: ಭಾರತ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವ್ಯಕ್ಯತಾ ಮಕ್ಕಳ ಮೇಳ

31/01/2024, 16:52

ಚಿತ್ರ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.ccm): ಭಾರತ ಸೇವಾದಳ ಜಿಲ್ಲಾ ಸಮಿತಿ, ಮಂಗಳೂರು ತಾಲೂಕು ಸಮಿತಿ ಮತ್ತು ಬೆಂಗ್ರೆ ಸಾಂಡ್ಸ್ ಪಿಟ್ ಶಾಲೆಯ ಆಶ್ರಯದಲ್ಲಿ ಇಂದು ಬೆಂಗ್ರೆ ಸ್ಯಾಂಡ್ಸ್ ಪಿಟ್ ಮೈದಾನದಲ್ಲಿ ಭಾರತ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವ್ಯಕ್ಯತಾ ಮಕ್ಕಳ ಮೇಳ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟನೆಗೈದು ಮಾತನಾಡಿದ ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಅವರು, ಭಾರತ ಸೇವಾದಳ ಮಕ್ಕಳಿಗಾಗಿ ಇರುವ ಶ್ರೇಷ್ಠ ಸಂಘಟನೆ. ಇದರಲ್ಲಿ ಇರುವ ವಿದ್ಯಾರ್ಥಿಗಳು ಜೀವನದುದ್ದಕ್ಕೂ ಶಿಸ್ತನ್ನು ಅಳವಡಿಸಿಕೊಂಡು ಹೋದಾಗ,ಭವಿಷ್ಯದಲ್ಲಿ ಶ್ರೇಷ್ಠ ವ್ಯಕ್ತಿಯಾಗುವುದರಲ್ಲಿ ಸಂದೇಹವಿಲ್ಲ. ಭಾವ್ಯಕ್ಯತಾ ಮಕ್ಕಳ ಮೇಳ ಮಾಡುವುದರಲ್ಲಿ ಒಳ್ಳೆಯ ಅರ್ಥವಿದೆ. ಇದು ಇಂದಿಗೂ ಪ್ರಸ್ತುತ. ಸಾಮಾಜಿಕವಾಗಿ, ಆರ್ಥಿಕವಾಗಿ, ಸಂಸ್ಕೃತಿಕವಾಗಿ, ರಾಜಕೀಯವಾಗಿ ಎಲ್ಲರೂ ಒಟ್ಟಾಗಿ ಬದುಕುವಂತದ್ದು ಭಾವ್ಯಕ್ಯತೆಯ ಸಂದೇಶ. ಸೇವಾದಳದ ಶಿಸ್ತನ್ನು, ಸೇವಾ ಮನೋಭಾವನೆಯನ್ನು ಮತ್ತು ಪ್ರತಿಯೊಂದು ಅಂಶವನ್ನು ತಮ್ಮ ಜೀವನದುದ್ದಕ್ಕೂ ಪಾಲಿಸಿದರೆ ಅದು ಇತರರಿಗೆ ಮಾದರಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.






ಅದಲ್ಲದೆ ನಗರದಲ್ಲಿ ಮುಂದಿನ ದಿನಗಳಲ್ಲಿ ಭಾರತ ಸೇವಾದಳದ ಕಟ್ಟಡ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅನುದಾನ ಮಂಜೂರು ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಶಿಕ್ಷಣ ಕ್ಷೇತ್ರದ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯಕ್, ಬೆಂಗ್ರೆ ಮಹಾಜನ್ ಸಂಘದ ಅಧ್ಯಕ್ಷ ಚೇತನ್ ಬೆಂಗ್ರೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ ವಹಿಸಿದ್ದರು. ಸೇವಾದಳ ತಾಲೂಕು ಅಧ್ಯಕ್ಷ ಪ್ರಭಾಕರ್ ಶ್ರೀಯನ್, ಜಿಲ್ಲಾ ದೈಹಿಕ ಶಿಕ್ಷಣಧಿಕಾರಿ ಭುವನೇಶ್,ಶಿಕ್ಷಣ ಇಲಾಖೆಯ ರವಿ ಶಂಕರ್, ಭರತ್, ಸೇವಾದಳದ ಮುಖ್ಯ ಸಂಘಟಕ ಮಂಜೇಗೌಡ, ಪ್ರೇಮ್ ಚಂದ್, ಲಾರೆನ್ಸ್ ಡಿಸೋಜ, ಶ್ ಸುಮಾ, ಶಾಲೆಯ ಮುಖ್ಯ್ಯೋ
ಪಾಧ್ಯಾಯಿನಿ ಉಮಾಲಕ್ಷ್ಮಿ,,ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಕೇಶ್ ಸುವರ್ಣ, ಕೃತಿನ್ ಕುಮಾರ್, ಸುನಿಲ್ ದೇವಾಡಿಗ ಉಪಸ್ಥಿತರಿದ್ದರು. ಸೇವಾದಳದ ಜಿಲ್ಲಾ ಕಾರ್ಯದರ್ಶಿ ಟಿ. ಕೆ. ಸುಧೀರ್ ಸ್ವಾಗತಿಸಿ, ತಾಲೂಕು ಕಾರ್ಯದರ್ಶಿ ಉದಯ್ ಕುಂದರ್ ವಂದಿಸಿದರು. ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು