8:47 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ

24/02/2024, 20:49

ಮಂಗಳೂರು(reporterkarnataka.com): ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು, ಕುಟುಂಬ,ಸಮಾಜದ ಜತೆಗೂ ಸಮತೋಲನ ಕಾಯ್ದುಕೊಂಡಾಗ ಬದುಕು ಯಶಸ್ಸು ಮತ್ತು ಸಾಧನೆಯಿಂದ ಕೂಡಿರಲು ಸಾಧ್ಯ ಎಂದು ಟಾಟಾ ಪ್ರಾಜೆಕ್ಟ್ ಲಿ. ಇದರ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಪೈ ಹೇಳಿದರು. ಅವರು ಶನಿವಾರ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತ್ಯಾಧುನಿಕ ಲ್ಯಾಬ್ ಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ದೇಶ ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗುವತ್ತ ಧಾವಿಸುತ್ತಿದ್ದು ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕೊಡುಗೆಯಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದವರು ಹೇಳಿದರು.


ಇನ್ನೋರ್ವ ಮುಖ್ಯ ಅತಿಥಿ ಏಷ್ಯಾ ಎಟ್ ವರ್ಲಿ ಅಧ್ಯಕ್ಷ ದಿನೇಶ್ ಪಿಸುರ್ಲೇಂಕರ್ ಮಾತನಾಡಿ ಭಾರತೀಯ ಯುವ ಸಂಪನ್ಮೂಲಕ್ಕೆ ಜಾಗತಿಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಜೀವನದಲ್ಲಿ ಶಿಸ್ತು, ಉತ್ತಮ ಮನೊಭಾವ,ಚುರುಕುತನದ ಜತೆಗೆ ಕಠಿಣ ಪರಿಶ್ರಮವಿದ್ದಾಗ ಜೀವನವನ್ನು ಆನಂದಿಸಲು ಸಾಧ್ಯ ಎಂದರು.
ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಶ್ ಎಚ್. ಆರ್. ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ. ಪೈ ಸ್ವಾಗತಿಸಿ ಆಡಳಿತ ಮಂಡಳಿಯ ಸಹ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್ ವಂದಿಸಿದರು.
ಸಹಪ್ರಾಧ್ಯಾಪಕಿ ಕ್ಯಾರಲ್ ಡಿ. ಮೆಲ್ಲೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು