5:36 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೆಂಕಿ ಅವಘಡಕ್ಕೆ ತುತ್ತಾದ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ: ಗರಿಷ್ಠ ಪರಿಹಾರಕ್ಕೆ ಸೂಚನೆ

10/06/2024, 23:39

ಮಂಗಳೂರು(reporterkarnataka.com): ಬೆಂಕಿ ಅವಘಡ ಸಂಭವಿಸಿದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮಾರುಕಟ್ಟೆಯ 8 ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್. ಪೂಜಾರಿ ಅವರು ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು. ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಮಾತನಾಡಿದ ಪದ್ಮರಾಜ್‌ರವರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು