4:12 AM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ

23/11/2023, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು.ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ. ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿರುತ್ತಾರೆ. ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದು ಒಬ್ಬಳೇ ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದಾರೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಔಷಧಿಗೆ ಶೇ 50ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋಥೆರಪಿ ನೀಡುತ್ತಿದ್ದಾರೆ.


ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದೆ. ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು.ಅಥವಾ ಧಾನಿಗಳು ಖಾತೆ ಸಂಖ್ಯೆ 0692500136635601. ಐಎಫ್ ಎಸ್ ಸಿ ಕೋಡ್ : ಕೆಎಆರ್ ಬಿ0000069. ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು