8:55 PM Friday20 - November 2026
ಬ್ರೇಕಿಂಗ್ ನ್ಯೂಸ್
ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್…

ಇತ್ತೀಚಿನ ಸುದ್ದಿ

ಯುಪಿ ಮುಖ್ಯಮಂತ್ರಿಗೆ ಮಾತೃವಿಯೋಗ: ಸುದ್ದಿ ತಿಳಿದರೂ ಕಾರ್ಯಕ್ರಮ ಮುಂದುವರೆಸಿದ ಯೋಗಿ ಆದಿತ್ಯನಾಥ್

20/11/2026, 20:54

ಲಕ್ನೋ(reporterkarnataka.com): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ಉತ್ತರಾಖಂಡದಲ್ಲಿ ನಿಧನರಾಗಿದ್ದಾರೆ. ಪೌಡಿ ಜಿಲ್ಲೆಯ ತಮ್ಮ ಪೂರ್ವಜರ ಗ್ರಾಮವಾದ ಪಂಚೂರ್‌ನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

*ತಾಯಿಯ ನಿಧನದ ಸುದ್ದಿ ತಿಳಿದರೂ ಕಾರ್ಯಕ್ರಮ ಮುಂದುವರಿಸಿದ ಯೋಗಿ*
ತಾಯಿಯ ನಿಧನದ ಸುದ್ದಿ ಬಂದ ಸಮಯದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. 50 ಸಾವಿರ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಿಸುವ ಈ ಸಮಾರಂಭದ ನಡುವೆಯೇ ಅವರಿಗೆ ಈ ದುಃಖದ ಸುದ್ದಿ ತಲುಪಿತು.

ಆದಾಗ್ಯೂ, ಅವರು ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸದೆ ಮುಂದುವರಿಸಿದರು. ಸಿಎಂ ಯೋಗಿ ಅವರು ಪೌಡಿಗೆ ತೆರಳಿ ಅಂತಿಮ ದರ್ಶನ ಪಡೆದು ಅಂತಿಮ ವಿಧಿ ವಿಧಾನದಲ್ಲಿ ಪಾಲ್ಗೊಂದರು.

ಇತ್ತೀಚಿನ ಸುದ್ದಿ

ಜಾಹೀರಾತು