4:27 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

11/04/2022, 15:53

ಬೆಂಗಳೂರು(reporterkarnataka.com): ಬೆಲೆಯೇರಿಕೆ ಕುರಿತಂತೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರಗಿಸಲಾಗುವುದು ಎಂದರು.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು