9:27 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್

30/06/2025, 23:41

ಬೆಂಗಳೂರು(reporterkarnataka.com): ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು.
ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆಯಲ್ಲಿ 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಿಂದಲೇ ಕಾರ್ಯನಿರ್ವಹಿಸಲಿದೆ.
ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, “ನಗರದ ಪ್ರಮುಖ ಬಡಾವಣೆ ಬಿಟಿಎಂ ಲೇಔಟ್‌ ಉಪ ವಿಭಾಗದಲ್ಲಿ 83,000 ಕ್ಕೂ ಹೆಚ್ಚಿನ ಸಂಪರ್ಕಗಳಿವೆ. ಸಾರ್ವಜನಿಕರಿಗೆ ನೂತನ ಉಪವಿಭಾಗ ಕೇಂದ್ರವು ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.
“ಬೆಸ್ಕಾಂ ವಿದ್ಯುತ್ ಪೂರೈಕೆ ಜತೆಗೆ ಸ್ವಂತವಾಗಿ ಮೂಲಸೌಕರ್ಯ ಕಲ್ಪಿಸಿಕೊಳ್ಳುವುದಕ್ಕೂ ಒತ್ತು ನೀಡುತ್ತಿದ್ದು, ಇದರಿಂದ ಭವಿಷ್ಯದಲ್ಲಿ ಆರ್ಥಿಕವಾಗಿಯೂ ಹೊರೆ ತಗ್ಗಲಿದೆ. ಎಲ್ಲಾ ಮೂಲ ಸೌಕರ್ಯಗಳಿರುವುದರಿಂದ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತವಾಗಿ ಸೇವೆ ಲಭ್ಯವಾಗಲಿದೆ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

*ಕಟ್ಟಡದ ವಿಶೇಷತೆ:*
ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಬಿಟಿಎಂ ಬಡಾವಣೆಯಲ್ಲಿ ಸುಮಾರು 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, 7431.50 ಚದರ ಅಡಿಯಲ್ಲಿ ಮೂರು ಅಂತಸ್ತನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು